By: Annie Priya
October 6 2022
ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರ ಬಳಕೆ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕದಲ್ಲಿ ‘ಭಾರತ್ ಜೋಡೊ ಯಾತ್ರೆ’ಯ ಮೂಲಕ ಸದ್ದು ಮಾಡಿರುವ ರಾಹುಲ್ ಗಾಂಧಿ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ. ರಾಹುಲ್ ಗಾಂಧಿ ಅವರ ಭಾವಚಿತ್ರವಿದ್ದ ಕನ್ನಡ ಧ್ವಜವು ಭಾನುವಾರ (ಅ 2) ಅಲ್ಲಲ್ಲಿ ಕಂಡು ಬಂದಿದ್ದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬಗ್ಗೆ ಕರ್ನಾಟಕ ನವ ನಿರ್ಮಾಣ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ‘ಕನ್ನಡ ಧ್ವಜಗಳನ್ನು ರಾಜಕಾರಣಕ್ಕೆ ಬಳಸುವುದು ಸರಿಯಲ್ಲ. ವಯನಾಡು ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಕರ್ನಾಟಕದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಏನು? ಈ ಬಗ್ಗೆ ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ ಎಂದು ‘ರಿಪಬ್ಲಿಕ್ ವರ್ಲ್ಡ್’ ಜಾಲತಾಣ ವರದಿ ಮಾಡಿದೆ.