ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಮಾತ್ರವಲ್ಲ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳಿಂದ ಹೆಚ್ಚಿನ ನ್ಯಾಯಾಧೀಶರನ್ನು ನೇಮಕ ಮಾಡುವ ಭರವಸೆಯನ್ನು ನೀಡಿದೆ

ಮೂಲಕ: ರಾಜೇಶ್ವರಿ ಪರಸ
ಏಪ್ರಿಲ್ 23 2024

ಲೇಖನ ಹಂಚಿಕೊಳ್ಳಿ: facebook logo twitter logo linkedin logo
ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಮಾತ್ರವಲ್ಲ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳಿಂದ ಹೆಚ್ಚಿನ ನ್ಯಾಯಾಧೀಶರನ್ನು ನೇಮಕ ಮಾಡುವ ಭರವಸೆಯನ್ನು ನೀಡಿದೆ

ಸಮಾಜಿಕ ಮಾಧ್ಯಮಗಳಲ್ಲಿ ಕಂಡ ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್. (ಮೂಲ: ಎಕ್ಸ್/ಫೇಸ್‌ಬುಕ್/ಲಾಜಿಕಲಿ ಫ್ಯಾಕ್ಟ್ಸ್ ನಿಂದ ಮಾರ್ಪಡಿಸಲಾಗಿದೆ)

ಫ್ಯಾಕ್ಟ್ ಚೆಕ್ಸ್

ತೀರ್ಪು ಸಂದರ್ಭದಿಂದ ಹೊರಗಿಡಲಾಗಿದೆ

ಕಾಂಗ್ರೆಸ್ ಪ್ರಣಾಳಿಕೆಯು ಹೆಚ್ಚಿನ ಮಹಿಳೆಯರು, ಹಿಂದುಳಿದ ಜನರು ಮತ್ತು ಅಲ್ಪಸಂಖ್ಯಾತರನ್ನು ನ್ಯಾಯಾಧೀಶರನ್ನಾಗಿ ನೇಮಿಸಲಾಗುವುದು ಎಂದು ಹೇಳುತ್ತದೆ.

ಕ್ಲೈಮ್ ಐಡಿ 49f1cb56

ಹೇಳಿಕೆ ಏನು? 

ಭಾರತದಲ್ಲಿ ೨೦೨೪ ರ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ "ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಹೆಚ್ಚಿನ ನ್ಯಾಯಾಧೀಶರನ್ನು ನೇಮಿಸುವುದಾಗಿ" ಭರವಸೆ ನೀಡಿದೆ ಎಂದು ಫೇಸ್‌ಬುಕ್ ಮತ್ತು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ ವೀಡಿಯೋ ಹೇಳುತ್ತದೆ.

“ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಅಲ್ಪಸಂಖ್ಯಾತರು ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಆಯೋಗಗಳ ಸ್ವಾಯತ್ತತೆಯನ್ನು ಬಲಪಡಿಸಲು ಕಾಂಗ್ರೆಸ್ ಭರವಸೆ ನೀಡಿದೆ” ಎಂದು ವೀಡಿಯೋದಲ್ಲಿರುವ ವ್ಯಕ್ತಿ ಹೇಳಿದ್ದಾರೆ. ಈ ಪ್ರಸ್ತಾವನೆಯನ್ನು ಪ್ರಶ್ನಿಸುತ್ತಾ, ತೆಲುಗು ಭಾಷೆಯಲ್ಲಿ - ಹಿಂದೂ ಸಮುದಾಯವು ಈ ಬೆಳವಣಿಗೆಯ ಬಗ್ಗೆ ತಿಳಿದಿರಬೇಕು ಎಂದು ಅವರು ಹೇಳುತ್ತಾರೆ. ಈ ಚೆಕ್ ಬರೆಯುವ ಸಮಯದಲ್ಲಿ, ವೀಡಿಯೋ ೩೯,೦೦೦ ವೀಕ್ಷಣೆಗಳನ್ನು ಗಳಿಸಿತ್ತು. ಈ ಪೋಷ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು.

ಬಿಜೆಪಿ ಕರ್ನಾಟಕ ತನ್ನ ಅಧುಕೃತ ಎಕ್ಸ್ ಖಾತೆಯಲ್ಲಿ ಈ ಹೇಳಿಕೆಯನ್ನು ಉಲ್ಲೇಖಿಸಿದೆ. ಅದರ ಆರ್ಕೈವ್ ಅವರುತ್ತಿಯನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಹೇಳಿಕೆಯೊಂದಿಗೆ ಹಂಚಿಕೊಂಡ  ಪೋಷ್ಟ್ ಗಳನ್ನು ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಸಮಾಜಿಕ ಮಾಧ್ಯಮಗಳಲ್ಲಿ ಕಂಡ ವೈರಲ್ ಪೋಷ್ಟ್ ಗಳ ಸ್ಕ್ರೀನ್‌ಶಾಟ್.
(ಮೂಲ: ಎಕ್ಸ್/ಫೇಸ್‌ಬುಕ್/ಲಾಜಿಕಲಿ ಫ್ಯಾಕ್ಟ್ಸ್ ನಿಂದ ಮಾರ್ಪಡಿಸಲಾಗಿದೆ)

ಆದರೆ, ಈ ಹೇಳಿಕೆಯನ್ನು ಸಂದರ್ಭದಿಂದ ಹೊರಗಿಡಲಾಗಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯು ಯಾವುದೇ ಒಂದು ಸಮುದಾಯವನ್ನು ನಿರ್ದಿಷ್ಟಪಡಿಸಿಲ್ಲ. "ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ಸೇರಿದ ವ್ಯಕ್ತಿಗಳನ್ನು ನ್ಯಾಯಾಧೀಶರನ್ನಾಗಿ ನೇಮಿಸಲಾಗುವುದು" ಎಂದು ಅದು ಹೇಳುತ್ತದೆ.

ವಾಸ್ತವಾಂಶಗಳು

೨೦೨೪ ರ ಲೋಕಸಭೆ ಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ನಾವು ಪರಿಶೀಲಿಸಿದ್ದೇವೆ. ‘ನ್ಯಾಯ ಪತ್ರ’  ಎಂದು  ಪ್ರಣಾಳಿಕೆಯಲ್ಲಿನ ಕೀವರ್ಡ್ ಹುಡುಕಾಟವು ನಮ್ಮನ್ನು ‘ನ್ಯಾಯಾಂಗ’ ವಿಭಾಗಕ್ಕೆ ಕರೆದೊಯ್ಯಿತು, ಅಲ್ಲಿ ಪಕ್ಷವು ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ನಿರ್ದಿಷ್ಟ ಕ್ರಮದ ಅಂಶಗಳ ಭರವಸೆಯನ್ನು ನೀಡಿದೆ.

ಈ ವಿಭಾಗದ ಅಡಿಯಲ್ಲಿ ಐದನೇ ಪಾಯಿಂಟ್ , “ಹೆಚ್ಚು ಮಹಿಳೆಯರು ಮತ್ತು ಎಸ್‌ಸಿ (ಪರಿಶಿಷ್ಟ ಜಾತಿಗಳು), ಎಸ್‌ಟಿ (ಪರಿಶಿಷ್ಟ ಬುಡಕಟ್ಟುಗಳು), ಒಬಿಸಿ (ಇತರ ಹಿಂದುಳಿದ ವರ್ಗಗಳು) ಮತ್ತು ಅಲ್ಪಸಂಖ್ಯಾತರಿಗೆ ಸೇರಿದವರನ್ನು  ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಲಿಸಲಾಗುವುದು," ಎಂದು ಹೇಳುತ್ತದೆ.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ನ್ಯಾಯಾಧೀಶರ ನೇಮಕಕ್ಕೆ ಕ್ರಮ. (ಮೂಲ: ಕಾಂಗ್ರೆಸ್ ಪ್ರಣಾಳಿಕೆ)

ನಾವು 'ಮುಸ್ಲಿಂ' ಮತ್ತು 'ನ್ಯಾಯಾಧೀಶರು' ಎಂಬ ಪದಗಳೊಂದಿಗೆ ಡಾಕ್ಯುಮೆಂಟ್ ಅನ್ನು ಹುಡುಕಿದೆವು ಆದರೆ ವೈರಲ್ ಪೋಷ್ಟ್ ನಲ್ಲಿ ಹೇಳಿದಂತೆ ಯಾವುದೇ ಹೇಳಿಕೆ ಕಂಡುಬಂದಿಲ್ಲ. ಇದಲ್ಲದೆ, ಮುಸ್ಲಿಂ ನ್ಯಾಯಾಧೀಶರ ನೇಮಕಾತಿಯ ಬಗ್ಗೆ ಯಾವುದೇ ಕಾಂಗ್ರೆಸ್ ನಾಯಕರು ಮಾತನಾಡಿರುವ ಯಾವುದೇ ಉಲ್ಲೇಖ ಅಥವಾ ಪುರಾವೆಗಳು ನಮಗೆ ಕಂಡುಬಂದಿಲ್ಲ.

ಏಪ್ರಿಲ್ ೬ ರಂದು ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯು ಈ ಭರವಸೆಯ ಬಗ್ಗೆ ಪ್ರಸ್ತಾಪಿಸಿದೆ. ಹೆಚ್ಚಿನ ಮಹಿಳೆಯರು, ಎಸ್‌ಸಿ, ಎಸ್‌ಟಿ, ಒಬಿಸಿ ಹಾಗು ಅಲ್ಪಸಂಖ್ಯಾತರಿಗೆ ಸೇರಿದ ವ್ಯಕ್ತಿಗಳನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅದು ಸೂಚಿಸಿದೆ.

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು- ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಝೋರಾಸ್ಟ್ರಿಯನ್ನರು (ಪಾರ್ಸಿಗಳು) ಭಾರತದಲ್ಲಿ ಅಲ್ಪಸಂಖ್ಯಾತರ ಸಮುದಾಯಗಳು ಎಂದು ಹೇಳುತ್ತದೆ. ಈ ಎಲ್ಲಾ ಸಮುದಾಯಗಳನ್ನು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಕಾಯ್ದೆ, ೧೯೯೨ ರ ಸೆಕ್ಷನ್ ೨(ಸಿ) ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳೆಂದು ಸೂಚಿಸಲಾಗಿದೆ.

ತೀರ್ಪು 

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಸಮುದಾಯದಿಂದ ಮಾತ್ರ ಹೆಚ್ಚಿನ ನ್ಯಾಯಾಧೀಶರನ್ನು ನೇಮಿಸಲಾಗುವುದು ಎಂದು ಉಲ್ಲೇಖಿಸಲಾಗಿಲ್ಲ. ಪ್ರಣಾಳಿಕೆಯು ಹೆಚ್ಚು ಮಹಿಳಾ ನ್ಯಾಯಾಧೀಶರು ಮತ್ತು ಅಂಚಿನಲ್ಲಿರುವ ಹಾಗು ಅಲ್ಪಸಂಖ್ಯಾತ ಸಮುದಾಯಗಳಿಂದ ನ್ಯಾಯಾಧೀಶರನ್ನು ನೇಮಕ ಮಾಡಲು ಭರವಸೆ ನೀಡುತ್ತದೆ.

(ಅನುವಾದಿಸಿದವರು: ಅಂಕಿತಾ ಕುಲಕರ್ಣಿ )

Read this fact-check in English here

ಈ ವಾಸ್ತವಾಂಶವನ್ನು ಪರಿಶೀಲಿಸಿ

English , తెలుగు , ಕನ್ನಡ

ನೀವು ಫ್ಯಾಕ್ಟ್-ಚೆಕ್ ಗಾಗಿ ಕ್ಲೈಮ್ ಸಲ್ಲಿಸಲು ಬಯಸುವಿರಾ ಅಥವಾ ನಮ್ಮ ಸಂಪಾದಕೀಯ ತಂಡವನ್ನು ಸಂಪರ್ಕಿಸಲು ಬಯಸುವಿರಾ?

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.